Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯ ಆಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ನಾಡನ್ನೂ ಮನಸ್ಸೆಕುಲದ ಅರ್ಧ ಜನರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಿಲ್ಯಾದಿನ ವಿುಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಿಲ್ಯಾದಿನ ಇನ್ನೊಂದು ಅರ್ಧಪ್ರದೇಶ ಮತ್ತು ಇಡೀ ಬಾಷಾನ್ ದೇಶವನ್ನು ಮನಸ್ಸೆಯ ಅರ್ಧಕುಲದವರಿಗೆ ಹಂಚಿದೆನು.” (ಬಾಷಾನ್ ಓಗನ ಸಾಮ್ರಾಜ್ಯವಾಗಿತ್ತು. ಬಾಷಾನಿನ ಒಂದು ಭಾಗವನ್ನು ಅರ್ಗೋಬ್ ಎಂದು ಕರೆಯುತ್ತಾರೆ. ಅಲ್ಲದೆ ರೆಫಾಯರ ದೇಶವೆಂತಲೂ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:13
10 ತಿಳಿವುಗಳ ಹೋಲಿಕೆ  

ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)


ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ, ಗಾದ್ಯರಿಗೂ ಹಾಗು ಮನಸ್ಸೆ ಕುಲದವರಲ್ಲಿ ಅರ್ಧಜನರಿಗೂ ಸ್ವತ್ತಾಗಿ ಕೊಟ್ಟೆವಷ್ಟೆ.


ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬರಲಾಗಿ ನಾವು ಅವರನ್ನು ಸೋಲಿಸಿದೆವು.


ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು