ಧರ್ಮೋಪದೇಶಕಾಂಡ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 (ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 (ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮನಸ್ಸೆ ಕುಲದ ಯಾಯೀರ ಎಂಬಾತನು ಅರ್ಗೋಬ್ ಪ್ರದೇಶಗಳನ್ನು ವಶಪಡಿಸಿಕೊಂಡನು. ಆ ಪ್ರದೇಶ ಗೆಷೂರ್ಯರ ಮತ್ತು ಮಾಕಾತ್ಯರ ದೇಶದ ಮೇರೆಯ ತನಕ ಹಬ್ಬಿತ್ತು. ಆದ್ದರಿಂದ ಆ ಪ್ರದೇಶಕ್ಕೆ ಯಾಯೀರ್ ಎಂಬ ಹೆಸರು ಬಂತು. ಇಂದಿಗೂ ಜನರು ಆ ಊರುಗಳಿಗೆ, “ಯಾಯೀರನ ಬಾಷಾನ್ ಊರುಗಳು” ಎಂದು ಕರೆಯುತ್ತಾರೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |