Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕೆಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:28
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;


ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.


ನಮ್ಮ ಹಿರಿಯರು ಅದನ್ನು ತಮ್ಮ ಪೂರ್ವಿಕರಿಂದ ಹೊಂದಿದ್ದರು. ಅವರು ಯೆಹೋಶುವನನ್ನು ಅನುಸರಿಸಿ ಬಂದು ದೇವರು ತಳ್ಳಿಬಿಟ್ಟ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಅಲ್ಲೇ ಇತ್ತು.


ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ಬೇರೊಂದು ದಿನವನ್ನು ಕುರಿತು ದೇವರು ಹೇಳುತ್ತಿರಲಿಲ್ಲವಲ್ಲಾ.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ಆ ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.


“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.


ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು