ಧರ್ಮೋಪದೇಶಕಾಂಡ 30:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು, ಆತನು ನಿಮ್ಮ ಪೂರ್ವಿಕರ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರುಗಿ ಸಂತೋಷಪಟ್ಟು ನಿಮಗೆ ಮೇಲನ್ನು ಉಂಟುಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಹೇಳಿದಂತೆ ನೀವು ನಡೆದುಕೊಳ್ಳಬೇಕು. ಈ ಧರ್ಮೋಪದೇಶ ಪುಸ್ತಕದಲ್ಲಿ ಬರೆದಿರುವ ಬೋಧನೆಗಳನ್ನು ನೀವು ಅನುಸರಿಸಬೇಕು. ನಿಮ್ಮ ಪೂರ್ಣಪ್ರಾಣದಿಂದಲೂ ಪೂರ್ಣಆತ್ಮದಿಂದಲೂ ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಬೇಕು; ಆಗ ನಿಮಗೆ ಈ ಎಲ್ಲಾ ಒಳ್ಳೆಯ ಸಂಗತಿಗಳು ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು. ಅಧ್ಯಾಯವನ್ನು ನೋಡಿ |