Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಈ ದಿನ ನೀವು ಜೀವ ಮತ್ತು ಮರಣ; ಶುಭ ಮತ್ತು ಅಶುಭ ಇವುಗಳನ್ನು ಆಯ್ಕೆಮಾಡಿಕೊಳ್ಳಲು ನಿಮಗೆ ಅವಕಾಶ ಮಾಡಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:15
18 ತಿಳಿವುಗಳ ಹೋಲಿಕೆ  

ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.


ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು