ಧರ್ಮೋಪದೇಶಕಾಂಡ 30:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು. ಅಧ್ಯಾಯವನ್ನು ನೋಡಿ |