Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:19
33 ತಿಳಿವುಗಳ ಹೋಲಿಕೆ  

“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.


ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ, ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.


ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ, ನಿನ್ನ ಕೈ ನನಗೆ ನೆರವಾಗಲಿ.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.


ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


“ನೀನು ಈ ಜನರಿಗೆ ಹೀಗೆ ಹೇಳು” ಎಂದು ಯೆಹೋವನು ನನಗೆ ಅಪ್ಪಣೆಕೊಟ್ಟಿದ್ದಾನೆ. ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಜೀವಿಸುವ ಮಾರ್ಗವನ್ನೂ ಮತ್ತು ಸಾಯುವ ಮಾರ್ಗವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.


ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,


ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.


ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.


ನನ್ನಿಂದ ನಿನ್ನ ದಿನಗಳು ಹೆಚ್ಚುವವು, ನಿನ್ನ ಆಯುಷ್ಯದ ವರ್ಷಗಳು ವೃದ್ಧಿಯಾಗುವವು.


ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.


ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು