Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮಲ್ಲಿ ಯಾರಾದರೂ ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟರೂ, ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರೆದುಕೊಂಡು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮಲ್ಲಿ ಯಾರಾದರು ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟಿದ್ದರೂ ಅಲ್ಲಿಂದ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ಕರೆದುತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಮ್ಮಲ್ಲಿ ಯಾರಾದರೂ ಭೂಲೋಕದ ಕೊನೆಯವರೆಗೂ ಒಯ್ಯಲ್ಪಟ್ಟರೂ ಅಲ್ಲಿಂದಲೂ ನಿಮ್ಮ ದೇವರಾದ ಯೆಹೋವನು ಅವರನ್ನೂ ಕರತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:4
16 ತಿಳಿವುಗಳ ಹೋಲಿಕೆ  

ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”


ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು