Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮ ಪೂರ್ವಿಕರಿಗೆ ಸ್ವತ್ತಾಗಿದ್ದ ದೇಶದಲ್ಲಿ ಸೇರಿಸಿ, ಅದು ನಿಮಗೂ ಸ್ವದೇಶವಾಗುವಂತೆ ಮಾಡಿ, ನಿಮಗೆ ಮೇಲನ್ನುಂಟುಮಾಡಿ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:5
9 ತಿಳಿವುಗಳ ಹೋಲಿಕೆ  

ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.


ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು