Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಿಮ್ಮ ದೇವರಾದ ಯೆಹೋವನು ಕೆಟ್ಟಸಂಗತಿಗಳೆಲ್ಲಾ ನಿಮ್ಮ ವೈರಿಗಳಿಗೆ ಆಗುವಂತೆ ಮಾಡುವನು. ಯಾಕೆಂದರೆ ಅವರು ನಿಮ್ಮನ್ನು ದ್ವೇಷಿಸಿ ತೊಂದರೆ ಕೊಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಆ ಶಾಪಗಳನ್ನೆಲ್ಲಾ ನಿಮ್ಮ ಶತ್ರುಗಳ ಮೇಲೆಯೂ, ನಿಮ್ಮನ್ನು ಹಿಂಸಿಸಿದ ನಿಮ್ಮ ಹಗೆಯವರ ಮೇಲೆಯೂ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:7
28 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.


ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.


ಯೆಹೋವನು ಇಂತೆನ್ನುತ್ತಾನೆ, “ದಮಸ್ಕವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.


ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು