Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-10 ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ ಪಶು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನುಂಟುಮಾಡುವನು. ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಆತನ ಕಡೆಗೆ ತಿರುಗಿಕೊಳ್ಳಲು ಆತನು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲಿಯೂ ತಿರಿಗಿ ಸಂತೋಷಪಟ್ಟು ನಿಮಗೆ ಮೇಲನ್ನುಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:9
19 ತಿಳಿವುಗಳ ಹೋಲಿಕೆ  

ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.


ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರಲ್ಲಿ ಹರ್ಷಗೊಳ್ಳುವೆನು. ರೋದನ ಶಬ್ದವೂ, ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.


ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ನೀವಾದರೋ ಯೆಹೋವನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳಂತೆ ನಡೆಯುವಿರಿ.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು