Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:12
14 ತಿಳಿವುಗಳ ಹೋಲಿಕೆ  

ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”


ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡಿಸುವ ಎಲ್ಲಾ ಕೆಲಸಗಳಲ್ಲಿಯೂ ಜಾಣರಾಗಿ ಅಭಿವೃದ್ಧಿಹೊಂದುವಿರಿ.


ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು