ಧರ್ಮೋಪದೇಶಕಾಂಡ 31:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವುದಕ್ಕೆ ಕಲಿತುಕೊಳ್ಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮತ್ತು ಯೆಹೋವನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರೂ ಕೇಳಿ ನೀವು ಸ್ವಾಧೀನಮಾಡಿಕೊಳ್ಳವದಕ್ಕೆ ಯೊರ್ದನ್ ಹೊಳೆಯನ್ನು ದಾಟಿಹೋಗುವ ದೇಶದಲ್ಲಿ ವಾಸವಾಗಿರುವವರೆಗೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಕಲಿತುಕೊಳ್ಳುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು. ಅಧ್ಯಾಯವನ್ನು ನೋಡಿ |