Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:16
44 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.


ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.


ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.


“ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನೆಯನ್ನು ಮೀರಿ ನಡೆದರೆ,


ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.


ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.


ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ನಾನು ಮರಣ ಹೊಂದಿ ನನ್ನ ಪೂರ್ವಿಕರ ಬಳಿಗೆ ಸೇರಿದಾಗ ನನ್ನ ಮೃತ ದೇಹವನ್ನು ಐಗುಪ್ತ ದೇಶದಿಂದ ತೆಗೆದುಕೊಂಡು ಹೋಗಿ ಆ ಪೂರ್ವಿಕರ ಸ್ಮಶಾನ ಭೂಮಿಯಲ್ಲಿಯೇ ಸಮಾಧಿ ಮಾಡಬೇಕು. ಹಾಗೆ ಮಾಡುತ್ತೇನೆಂಬುದಾಗಿ ನನಗೆ ಪ್ರಮಾಣ ಮಾಡಬೇಕು” ಎಂದು ಹೇಳಲು, ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದನು.


ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,


ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.


ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು” ಎಂದು ಹೇಳಿದಳು.


ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ಹರಟೆಹರಟುತ್ತಾರೆ, ಸುಳ್ಳಾಣೆಯಿಡುತ್ತಾರೆ, ಸಂಧಾನ ಮಾಡಿಕೊಳ್ಳುತ್ತಾರೆ; ಅಲ್ಲಿನ ನ್ಯಾಯವು ನೇಗಿಲಗೆರೆಗಳಲ್ಲಿ ಹುಟ್ಟುವ ವಿಷದ ಕಳೆಗಳಂತಿದೆ.


ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.


ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.


ಅವರು ನನ್ನನ್ನು ಬಿಟ್ಟು ಇತರ ದೇವರುಗಳನ್ನು ಆಶ್ರಯಿಸಿ ಬಹಳ ದುಷ್ಕಾರ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗಿರುವೆನು.


ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.


ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.


ಆ ಕಾಲದಲ್ಲಿ ಹಿಜ್ಕೀಯನನ್ನು ಮರಣಕರವಾದ ರೋಗವು ಬಾಧಿಸಿತು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “‘ನಿನ್ನ ಮನೆಯ ಕಾರ್ಯಗಳನ್ನೆಲ್ಲಾ ಕ್ರಮಪಡಿಸಿ ಸೂಕ್ತಮಾಡಿಕೋ, ನೀನು ಮರಣ ಹೊಂದುವಿ’ ಎಂದು ಯೆಹೋವನು ತಿಳಿಸಿದ್ದಾನೆ” ಎಂದು ಹೇಳಿದನು.


ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು