ಧರ್ಮೋಪದೇಶಕಾಂಡ 31:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.