Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀವು ಈ ಧರ್ಮಶಾಸ್ತ್ರಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. [ಇಸ್ರಾಯೇಲ್ಯರೇ,] ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡುವದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ, “ನೀವು ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:26
13 ತಿಳಿವುಗಳ ಹೋಲಿಕೆ  

“ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲರಿಗೆ ವಿರುದ್ಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠಮಾಡಿಸು.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.


ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.


ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,


ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು