Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:27
18 ತಿಳಿವುಗಳ ಹೋಲಿಕೆ  

ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು, “ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಅದನ್ನು ಅನುಸರಿಸದೆ, ದ್ರೋಹಿಗಳಾದ ಮಕ್ಕಳಾಗಿದ್ದಾರೆ.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.


“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಆಜ್ಞಾಶಾಸನಗಳ ಮಂಜೂಷದ ಬಳಿಯಲ್ಲಿ ಇಡಿರಿ. ಇಸ್ರಾಯೇಲರೇ, ಅಲ್ಲಿ ಇದು ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುವುದಾಗಿರಲಿ.


ಆದರೂ ನಮ್ಮ ಪೂರ್ವಿಕರು ಗರ್ವಿಗಳಾಗಿ ಹಠಹಿಡಿದು, ನಿನ್ನ ಆಜ್ಞೆಗಳಿಗೆ ಅವಿಧೇಯರಾದರು.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.


ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು