Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:9
29 ತಿಳಿವುಗಳ ಹೋಲಿಕೆ  

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.


ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.


ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.


“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಮೋಶೆಯ ಧರ್ಮನಿಯಮಗಳಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.


ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡು ಹೊರಟರು.


ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.


ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು