15 “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;
15 ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ, ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದೇಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೋ?’
ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.
ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.
ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.