ಧರ್ಮೋಪದೇಶಕಾಂಡ 32:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ಅಧ್ಯಾಯವನ್ನು ನೋಡಿ |