Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:23
19 ತಿಳಿವುಗಳ ಹೋಲಿಕೆ  

ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.


ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಯೆಹೋವನು ಅವನನ್ನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಪ್ರತ್ಯೇಕಿಸಿ ದಂಡಿಸುವನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ನನ್ನ ಬಾಣಗಳು ರಕ್ತವನ್ನು ಕುಡಿದು ಮತ್ತವಾಗುವವು; ನನ್ನ ಕತ್ತಿಯು ಕೊಲ್ಲಲ್ಪಟ್ಟವರ ಮತ್ತು ಸೆರೆಹಿಡಿದವರ ರಕ್ತಮಾಂಸಗಳನ್ನು ಭಕ್ಷಿಸಿ ಶತ್ರುಗಳಲ್ಲಿರುವ ವೀರರ ತಲೆಗಳನ್ನು ಚೆಂಡಾಡುವುದು’ ಎಂಬುದೇ.


ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.


ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.


ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು