ಧರ್ಮೋಪದೇಶಕಾಂಡ 32:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ. ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.”’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.” ಅಧ್ಯಾಯವನ್ನು ನೋಡಿ |
ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.