Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ಅವರ ವಿಷಯದಲ್ಲಿ ಹೇಳುವದೇನಂದರೆ - ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಶರಣನು ಎಲ್ಲಿದ್ದಾನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:37
8 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು” ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು