Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:38
12 ತಿಳಿವುಗಳ ಹೋಲಿಕೆ  

ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು