ಧರ್ಮೋಪದೇಶಕಾಂಡ 32:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 “ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 “‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.