ಧರ್ಮೋಪದೇಶಕಾಂಡ 32:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬದು ಎಷ್ಟು ನಿಶ್ಚಯವೋ ಅಷ್ಟು ಖಂಡಿತವಾಗಿ ಪ್ರಮಾಣಮಾಡುವೆನು; ಏನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.