Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 “ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು; ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:43
40 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?


ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಯೆಹೋವನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿತೀರಿಸಿದಂತಾಗುವುದು.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


“ನನ್ನ ಪ್ರಜೆಯಾದ ಐಗುಪ್ತಕ್ಕೂ, ನನ್ನ ಕೈಯಿಂದ ಸೃಷ್ಟಿಸಲ್ಪಟ್ಟ ಅಶ್ಶೂರಕ್ಕೂ, ನನ್ನ ಸ್ವತ್ತಾದ ಇಸ್ರಾಯೇಲಿಗೂ ಶುಭವಾಗಲಿ” ಎಂದು ಸೇನಾಧೀಶ್ವರನಾದ ಯೆಹೋವನು ಅವುಗಳನ್ನು ಆಶೀರ್ವದಿಸುವನು.


ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.


ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು