ಧರ್ಮೋಪದೇಶಕಾಂಡ 32:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ನೀವಿಬ್ಬರೂ ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿ ಇಸ್ರಾಯೇಲ್ಯರ ಮಧ್ಯದಲ್ಲಿ ನನಗೆ ವಿರೋಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆ ಹೋದದರಿಂದ ಹೀಗೆ ಆಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ. ಅಧ್ಯಾಯವನ್ನು ನೋಡಿ |