ಧರ್ಮೋಪದೇಶಕಾಂಡ 32:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇವಿುಸಿಕೊಟ್ಟಾಗ ಇಸ್ರಾಯೇಲ್ಯರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದ್ದೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು. ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು. ಅಧ್ಯಾಯವನ್ನು ನೋಡಿ |