ಧರ್ಮೋಪದೇಶಕಾಂಡ 33:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು. ಅಧ್ಯಾಯವನ್ನು ನೋಡಿ |
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.