ಧರ್ಮೋಪದೇಶಕಾಂಡ 33:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬೆನ್ಯಾಮೀನ್ ಕುಲದವರ ವಿಷಯದಲ್ಲಿ ಹೀಗಂದನು - ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ನಿವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.” ಅಧ್ಯಾಯವನ್ನು ನೋಡಿ |