Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾನ್‍ಕುಲದ ವಿಷಯದಲ್ಲಿ ಹೀಗಂದನು - ದಾನ್‍ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:22
14 ತಿಳಿವುಗಳ ಹೋಲಿಕೆ  

ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.


ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.


ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.


“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.


ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿದಾಗಿತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಸಂಹರಿಸಿಬಿಟ್ಟು,


ಅವರ ತೊಡೆ, ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿ, ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದರಿಂದ ಅವನಿಗೆ ಮಕ್ಕಳಿರಲಿಲ್ಲ.


“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.


‘ಆಹಾ, ನಿನ್ನ ತಾಯಿಯು ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನ್ನು, ಯುವ ಸಿಂಹಗಳ ನಡುವೆ ವಾಸಿಸಿ.


ಅವಳು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ, ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು