Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:29
43 ತಿಳಿವುಗಳ ಹೋಲಿಕೆ  

ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.


ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.


ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.


ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಡಗಿಸಿಕೋ! ಶಾಂತವಾಗಿ, ಸುಮ್ಮನಿರು!


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.


ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು, ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಯೆಹೋವನ ಕತ್ತಿ, ಗಿದ್ಯೋನನ ಕತ್ತಿ ಆಗಿದೆ” ಎಂದು ಕೂಗಿ


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.


ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು.


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.


ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.


ದೇವರ ಪ್ರತಾಪವನ್ನು ಕೊಂಡಾಡಿರಿ. ಆತನ ಗಾಂಭೀರ್ಯವು ಇಸ್ರಾಯೇಲರ ಆಶ್ರಯವಾಗಿದೆ; ಆತನ ಶಕ್ತಿಯು ಮೇಘಮಾರ್ಗದಲ್ಲೆಲ್ಲಾ ವ್ಯಾಪಿಸಿದೆ.


ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು