Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:7
28 ತಿಳಿವುಗಳ ಹೋಲಿಕೆ  

ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.


ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.


ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.


ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,


ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು.


ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.


ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,


ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಯೆಹೂದದ ಕುಲಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ವಿವರ:


ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು