ಧರ್ಮೋಪದೇಶಕಾಂಡ 33:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ. ಅಧ್ಯಾಯವನ್ನು ನೋಡಿ |