Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಬಳಿಕೆಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:10
10 ತಿಳಿವುಗಳ ಹೋಲಿಕೆ  

ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.


ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು.


ಯೆಹೋವನು ಮೋಶೆಯ ಮಾತಿನ ಪ್ರಕಾರವೇ ಮಾಡಿದನು. ಮನೆಗಳಲ್ಲಿಯೂ, ಅಂಗಳಗಳಲ್ಲಿಯೂ, ಬಯಲಿನಲ್ಲಿಯೂ ಇದ್ದ ಕಪ್ಪೆಗಳು ಸತ್ತುಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು