Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:4
15 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;


ಮೋಶೆಯ ಮಾವನಾದ ಕೇನ್ಯನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅಡವಿಗೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು