Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೋಶೆ ಸಾಯುವಾಗ ನೂರಿಪ್ಪತ್ತು ವರುಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:7
11 ತಿಳಿವುಗಳ ಹೋಲಿಕೆ  

ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.


ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


“ಅವನಿಗೆ ನಲವತ್ತು ವರ್ಷ ವಯಸ್ಸು ತುಂಬುತ್ತಾ ಇರಲು, ಇಸ್ರಾಯೇಲ್ ವಂಶಸ್ಥರಾದ ತನ್ನ ಸಹೋದರರನ್ನು ಹೋಗಿ ನೋಡಬೇಕೆಂಬ ಆಸೆಯು ಅವನ ಹೃದಯದಲ್ಲಿ ಹುಟ್ಟಿತು.


ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಸುಗ್ಗೀಕಾಲದಲ್ಲಿ ತೆನೆಯ ಸಿವುಡು ಮನೆಗೆ ಸೇರುವಂತೆ, ನೀನು ವೃದ್ಧಾಪ್ಯ ಕಳೆದ ಮೇಲೆ ಸಮಾಧಿಗೆ ಸೇರುವಿ.


ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು