Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:1
40 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನನ್ನ ಆಜ್ಞಾನಿಯಮಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾನಿಯಮಗಳ ಮೂಲಕ ಬದುಕುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.


ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


“ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.


ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.


ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಇಂಥ ನ್ಯಾಯವಾದ ಆಜ್ಞಾವಿಧಿಗಳುಳ್ಳ ಈ ಧರ್ಮಶಾಸ್ತ್ರಕ್ಕೆ ಸಮಾನವಾದದ್ದು ಬೇರೆ ಯಾವ ಜನಾಂಗಕ್ಕೆ ಉಂಟು?


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.


“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞಾವಿಧಿನಿಯಮಗಳನ್ನು ಕೈಕೊಳ್ಳದವರೂ, ಆತನನ್ನು ಮರೆಯುವವರೂ ಆಗಬೇಡಿರಿ.


ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.


ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,


ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,


ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು