ಧರ್ಮೋಪದೇಶಕಾಂಡ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ಸಂಗತಿಗಳು ಯಾವವಂದರೆ - ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ - ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ ಎಂದು ಹೇಳಿದ ದಿನದ ವಿಷಯಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೀನಾಯಿ ಬೆಟ್ಟದ ಬಳಿಯಲ್ಲಿ ನೀನು ಯೆಹೋವನ ಸನ್ನಿಧಾನದಲ್ಲಿ ನಿಂತಿದ್ದನ್ನು ನೀವು ಜ್ಞಾಪಕ ಮಾಡಿಕೊಳ್ಳಿರಿ. ಆತನು ನನಗೆ ಹೇಳಿದ್ದೇನೆಂದರೆ: ‘ನಾನು ಹೇಳುವ ಮಾತುಗಳನ್ನು ಕೇಳುವಂತೆ ಜನರನ್ನೆಲ್ಲಾ ಒಟ್ಟುಗೂಡಿಸು. ನನ್ನ ಮಾತುಗಳನ್ನು ಕೇಳಿ ಅವರು ಜೀವಮಾನವೆಲ್ಲಾ ನನ್ನನ್ನು ಸನ್ಮಾನಿಸಲು ಮತ್ತು ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು ಮತ್ತು ಅವರ ಮಕ್ಕಳಿಗೂ ಕಲಿಸುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |
ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.