ಧರ್ಮೋಪದೇಶಕಾಂಡ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲವಷ್ಟೆ. ಆದದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ. ಅಧ್ಯಾಯವನ್ನು ನೋಡಿ |