Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:19
30 ತಿಳಿವುಗಳ ಹೋಲಿಕೆ  

ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.


ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,


ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು.


ಹೀಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.


ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.


ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,


ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಯೆಹೋವನು ಇಂತೆನ್ನುತ್ತಾನೆ, ಹಗಲಿರುಳೆಂಬ ನನ್ನ ನಿಬಂಧನೆಯು ಸ್ಥಿರವಾಗಿ ನಿಲ್ಲದಿದ್ದರೆ, ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ವಿಧಿಸಿದವನಲ್ಲದಿದ್ದರೆ,


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು.


ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪವನ್ನಾಗಲಿ ಮತ್ತು ಭೂಮಿಯ ಕೆಳಗಣ ನೀರಿನಲ್ಲಿರುವ ಮೀನಿನ ರೂಪವನ್ನಾಗಲಿ ದೇವರ ಸ್ವರೂಪವೆಂದು ಮಾಡಿಕೊಂಡು ಭ್ರಷ್ಟರಾಗಬಾರದು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು