ಧರ್ಮೋಪದೇಶಕಾಂಡ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಚ್ಚರಿಕೆಯಾಗಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ. ಅಧ್ಯಾಯವನ್ನು ನೋಡಿ |
ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.