Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಆ ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:26
32 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.


ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ. ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ. ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”


ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!


ಆಕಾಶಮಂಡಲವೇ, ಇದಕ್ಕೆ ಬೆಚ್ಚಿಬೆರಗಾಗು, ತತ್ತರಿಸು, ಹಾಳಾಗು” ಎಂದು ಯೆಹೋವನು ನುಡಿಯುತ್ತಾನೆ.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ನಿಮ್ಮ ಕುಲಗಳ ಹಿರಿಯರನ್ನೂ, ಅಧಿಪತಿಗಳನ್ನೂ ನನ್ನ ಬಳಿಗೆ ಕೂಡಿಸಿರಿ; ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ ಅವರಿಗೆ ವಿರುದ್ಧವಾಗಿ ಸಾಕ್ಷಿಗಳಾಗುವುದಕ್ಕೆ ಭೂಮಿ ಮತ್ತು ಆಕಾಶಗಳನ್ನು ಕರೆಯುವೆನು.


ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.


ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.


ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.


ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ.


ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.


ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು