ಧರ್ಮೋಪದೇಶಕಾಂಡ 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆಗ ನೀವು ನಿಮ್ಮ ದೇವರಾದ ಯೆಹೋವನನ್ನು ಹುಡುಕುವಿರಿ. ನೀವು ನಿಮ್ಮ ಹೃದಯ ಆತ್ಮಗಳಿಂದ ಹುಡುಕಿದಾಗ ಆತನು ನಿಮಗೆ ಸಿಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ. ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.