Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದುದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವುದಿಲ್ಲ, ವಿನಾಶಕ್ಕೆ ಬಿಡುವುದಿಲ್ಲ. ಆತನು ನಿಮ್ಮ ಪೂರ್ವಿಕರ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿಮ್ಮ ದೇವರಾದ ಯೆಹೋವನು ಕರುಣೆಯುಳ್ಳ ದೇವರಾಗಿದ್ದಾನೆ. ನಿಮ್ಮನ್ನು ಅಲ್ಲಿಯೇ ಇರಗೊಡಿಸುವುದಿಲ್ಲ; ನಿಮ್ಮನ್ನು ಸಂಪೂರ್ಣವಾಗಿ ನಾಶಪಡಿಸುವುದಿಲ್ಲ; ನಿಮ್ಮ ಪೂರ್ವಿಕರೊಂದಿಗೆ ಮಾಡಿದ ಒಡಂಬಡಿಕೆಯನ್ನು ಆತನು ಮರೆತುಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:31
28 ತಿಳಿವುಗಳ ಹೋಲಿಕೆ  

ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.


ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ಆದರೆ ನೀನು ದಯೆಯೂ ಕನಿಕರವೂ ಉಳ್ಳ ದೇವರಾಗಿರುವುರಿಂದ ನಿನ್ನ ಮಹಾಕೃಪಾನುಸಾರವಾಗಿ ಅವರನ್ನು ನಾಶಮಾಡಲಿಲ್ಲ, ಕೈಬಿಡಲೂ ಇಲ್ಲ.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.


ತನ್ನಲ್ಲಿ ಭಯಭಕ್ತಿಯುಳ್ಳವರಿಗೆ ಆಹಾರವನ್ನು ಕೊಟ್ಟಿದ್ದಾನೆ; ತನ್ನ ಒಡಂಬಡಿಕೆಯನ್ನು ಯಾವಾಗಲೂ ನೆನಪಿನಲ್ಲಿಟ್ಟುಕೊಂಡಿದ್ದಾನೆ


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪೂರ್ವಿಕರನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು” ಎಂಬುದೇ.


ಆ ವಿಜ್ಞಾಪನೆಗಳಲ್ಲಿ ನಾನು, “ಯೆಹೋವನೇ, ಮಹೋನ್ನತನೂ, ಭಯಭಕ್ತಿಗೂ ಪಾತ್ರನಾಗಿರುವ ಪರಲೋಕದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವನೇ,


ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.”


ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು