Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:40
34 ತಿಳಿವುಗಳ ಹೋಲಿಕೆ  

ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.


ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.


“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.


ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.


ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.


ನಿಮ್ಮ ಕೋಟೆಯ ಬಾಗಿಲುಗಳಿಗೆ ಕಬ್ಬಿಣದ ಮತ್ತು ತಾಮ್ರದ ಅಗುಳಿಗಳು ಇರಲಿ; ನೀವು ಇರುವವರೆಗೂ ನಿಮಗೆ ಬಲವಿರಲಿ” ಎಂದು ಹೇಳಿದನು.


ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.


ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು