Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಮೋಶೆ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಮೋಶೆ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಇಸ್ರೇಲ್ ಜನರಿಗೆ ಮೋಶೆಯು ದೇವರ ಕಟ್ಟಳೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಮೋಶೆಯು ಇಸ್ರಾಯೇಲರ ಮುಂದೆ ಇಟ್ಟ ದೇವರ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:44
14 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.


“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಸ್ಪಷ್ಟವಾಗಿ ಬರೆಯಬೇಕು” ಎಂದು ಆಜ್ಞಾಪಿಸಿದನು.


ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.


ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:


ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.


ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.


ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ಇಸ್ರಾಯೇಲ್ಯರು ಯೊರ್ದನ್ ನದಿಯ ಪೂರ್ವ ದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ಕಣಿವೆ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು