Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45-46 ಇಸ್ರಾಯೇಲ್ಯರು ಐಗುಪ್ತದೇಶದಿಂದ ಬಂದಾಗ ಯೊರ್ದನ್ ಹೊಳೆಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವೇ. (ಮೋಶೆಯೂ ಇಸ್ರಾಯೇಲ್ಯರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:45
13 ತಿಳಿವುಗಳ ಹೋಲಿಕೆ  

ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ. ದಾಲಿತ್.


ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ, ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.


ಸರ್ವಸಂಪತ್ತಿನಲ್ಲಿ ಹೇಗೋ, ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.


ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.


ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!


ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.


ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಮೋಶೆ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವು ಇದೇ.


ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು