Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರ ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:10
22 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ, ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ. ನೀನು ಮಹಾ ಪರಾಕ್ರಮಿಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬುದು ನಿನ್ನ ಹೆಸರಾಗಿದೆ.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಸಾವಿರಾರು ತಲೆಮಾರುಗಳವರೆಗೂ ದಯೆತೋರಿಸುವವನು; ದೋಷಾಪರಾಧ ಪಾಪಗಳನ್ನು ಕ್ಷಮಿಸುವವನು; ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡುವುದಿಲ್ಲ; ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಮಾರುಗಳವರೆಗೆ ಬರಮಾಡುವವನು ಆಗಿದ್ದಾನೆ” ಎಂಬುದೇ.


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನೀವು ಈ ವಿಧಿಗಳನ್ನು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ಒಡಂಬಡಿಕೆಯನ್ನು ನಂಬಿಗಸ್ತಿಕೆಯಿಂದ ನೆರವೇರಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು